ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ


ಮಂಗಳೂರು: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ವ್ಯವಸ್ಥೆ ರೂಪಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮುಂದಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.

ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಕಸ್ತೂರಿ ರಂಗನ್ ವರದಿ, ಪ್ರವಾಸೋದ್ಯಮ ಅಭಿವೃದ್ಧಿ, ಮೂಲಸೌಕರ್ಯ, ಕಾನೂನು ಮತ್ತು ಸುವ್ಯವಸ್ಥೆ, ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ ಸೇರಿದಂತೆ ಕರಾವಳಿಯ ಪ್ರಮುಖ ವಿಷಯಗಳು ಚರ್ಚೆಗೆ ಬರುವ ಸಾಧ್ಯತೆಯಿದೆ.

ಇದರ ಜೊತೆಗೆ ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ವಿಚಾರವೂ ಮಹತ್ವ ಪಡೆದುಕೊಂಡಿದೆ. ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಎರಡನೇ ಭಾಷೆಯನ್ನಾಗಿ ಘೋಷಿಸಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದರು.

ಕರಾವಳಿ ಭಾಗದ ಬಹುದಿನಗಳ ಬೇಡಿಕೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳು ಹೊರಬೀಳುವ ನಿರೀಕ್ಷೆ ಮೂಡಿದೆ.

Post a Comment

Previous Post Next Post