ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ, ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಬಂಟ್ಸ್ ಹಾಸ್ಟೇಲ್‌ನ ಓಂಕಾರನಗರದಲ್ಲಿ ಆಯೋಜಿಸಿರುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹವನ್ನು ಭಕ್ತಿಪೂರ್ವಕವಾಗಿ ತರಲಾಯಿತು.
ಶರವು ದೇವಸ್ಥಾನದ ಬಳಿಯ ಶ್ರೀ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ ಬಳಿಕ ವಿಗ್ರಹವನ್ನು ಮೆರವಣಿಗೆಯ ಮೂಲಕ ಓಂಕಾರನಗರಕ್ಕೆ ತರಲಾಯಿತು.
ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಹಾಗೂ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಪ್ರತಿಷ್ಠಾನದ ಟ್ರಸ್ಟಿಗಳಾದ ಮಂಜುನಾಥ ಭಂಡಾರಿ ಶೆಡ್ಯೆ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೆ. ಬಾಲಕೃಷ್ಣ ಶೆಟ್ಟಿ ಬೆಳ್ಳಿಬೆಟ್ಟುಗುತ್ತು, ಕೃಷ್ಣಪ್ರಸಾದ್ ರೈ ಬೆಳ್ಳಿಪಾಡಿ, ಡಾ. ಆಶಾಜ್ಯೋತಿ ರೈ ಬಂಬ್ರಾಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಂಟರ ಮಾತೃಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಚಮೆ, ಮಂಗಳೂರು ತಾಲೂಕು ಸಮಿತಿ ಸಂಚಾಲಕ ದಿವಾಕರ ಸಾಮಾನಿ ಚೇಳಾರ್ ಗುತ್ತು, ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಹಾಗೂ ಸಮಿತಿಯ ಪದಾಧಿಕಾರಿಗಳು, ಸಮನ್ವಯಕಾರರು ಭಾಗವಹಿಸಿದ್ದರು.
ಇದೇ ವೇಳೆ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ವಿವಿಧ ಬಂಟರ ಸಂಘಗಳಿಂದ ಆಗಮಿಸಿದ ಹೊರೆಕಾಣಿಕೆಗಳನ್ನು ಹೊರೆಕಾಣಿಕೆ ಸಮಿತಿಯ ಸಂಚಾಲಕ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಹಾಗೂ ಸಹ ಸಂಚಾಲಕ ಹರೀಶ್ ಶೆಟ್ಟಿ ಬಜಪೆ ಸ್ವೀಕರಿಸಿದರು.
Post a Comment