ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2024 ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಆಯ್ಕೆಯಾದ ಕೃತಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
2024ನೇ ಸಾಲಿನ ಕವಿತೆ ವಿಭಾಗದಲ್ಲಿ ಯಶೋದ ಮೋಹನ್ ಅವರ ‘ತಡ್ಯ ಕಡಪುನಗ’ ಕೃತಿ ಹಾಗೂ ನಾಟಕ ವಿಭಾಗದಲ್ಲಿ ಅಕ್ಷತಾ ರಾಜ್ ಪೆರ್ಲ ಅವರ ‘ಮಂದಾರ ಮಲಕ’ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ.
2025ನೇ ಸಾಲಿನ ಕಾದಂಬರಿ ವಿಭಾಗದಲ್ಲಿ ರೂಪಕಲಾ ಆಳ್ವ ಅವರ ‘ಪಮ್ಮಕ್ಕೆನ ಪೊರ್‌ಂಬಾಟ’ ಕೃತಿ ಹಾಗೂ ಕವಿತೆ ವಿಭಾಗದಲ್ಲಿ ಅಶೋಕ ಎನ್. ಕಡೇಶಿವಾಲಯ ಅವರ ‘ಬದ್ ಬಾಗ್ಯದ ಬೊಲ್ಪು’ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪ್ರಶಸ್ತಿಯು ತಲಾ ₹25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಅಕ್ಟೋಬರ್ 4ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment