ಮಲ್ಪೆಯಲ್ಲಿ ಆಂಧ್ರ ಮೂಲದ ವ್ಯಕ್ತಿ ಬರ್ಬರ ಹತ್ಯೆ ; ಪ್ರತಿದಿನ ಮಲಗುತ್ತಿದ್ದ ಜಾಗದಲ್ಲೇ ಕೊಲೆಯಾದ ಪರಮೇಶ್

ಉಡುಪಿ: ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶ ಮೂಲದ ಪರಮೇಶ್ ಎಂದು ಗುರುತಿಸಲಾಗಿದೆ. ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಪರಮೇಶ್, ಪ್ರತಿದಿನ ಮಲಗುತ್ತಿದ್ದ ಸ್ಥಳದಲ್ಲೇ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಘಟನೆಯ ಮಾಹಿತಿ ತಿಳಿದು ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪರಿಶೀಲಿಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಕೊಲೆಗೆ ನಿಖರ ಕಾರಣವೇನು ಹಾಗೂ ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆ ಕುರಿತು ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Post a Comment

Previous Post Next Post