ಹಲವು ದಿನಗಳ ಪೈಪೋಟಿಗೆ ತೆರೆ : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ಗೆ ಹೊಸ ಸಾರಥಿ ನೇಮಕ ; ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕೆ ಪದ್ಮರಾಜ್ ಆರ್.ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಆಯ್ಕೆಯಾಗಿದ್ದಾರೆ. ಈ ಮೂಲಕ ಜಿಲ್ಲಾ ಕಾಂಗ್ರೆಸ್‌ನ ನೇತೃತ್ವಕ್ಕೆ ಹೊಸ ಸಾರಥ್ಯ ದೊರೆತಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿರುವ ಪದ್ಮರಾಜ್ ಪೂಜಾರಿ, ಇದೀಗ ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿಯಾಗಿರುವ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಷದೊಳಗೆ ಹಲವು ದಿನಗಳಿಂದ ನಡೆದಿದ್ದ ಚರ್ಚೆ ಹಾಗೂ ಪೈಪೋಟಿಗೆ ಇದೀಗ ತೆರೆ ಬಿದ್ದಿದೆ. ಹರೀಶ್ ಕುಮಾರ್ ಅವರ ಬಳಿಕ ಪದ್ಮರಾಜ್ ಪೂಜಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Post a Comment

Previous Post Next Post