ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರಾಗಿ ನಿಡಸಾಲೆ ಪುಟ್ಟಸ್ವಾಮಯ್ಯ ಆಯ್ಕೆ

ಬೆಂಗಳೂರು: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರಾಗಿ ನಿಡಸಾಲೆ ಪುಟ್ಟಸ್ವಾಮಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಸರ್ವ ಸದಸ್ಯರ ಮಹಾಸಭೆಯಲ್ಲಿ 2026-27ರಿಂದ 2030-31ರ ಅವಧಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಂಘದ ಉಪಾಧ್ಯಕ್ಷರಾಗಿ ಡಾ. ಭೈರಮಂಗಲ ರಾಮೇಗೌಡ ಹಾಗೂ ಕೆ.ಎಸ್. ಮುರಳಿ, ಕಾರ್ಯದರ್ಶಿಯಾಗಿ ಆರ್. ದೊಡ್ಡಗೌಡ, ಜಂಟಿ ಕಾರ್ಯದರ್ಶಿಯಾಗಿ ಬಿ.ಕೆ. ಸುರೇಶ್, ಸಂಘಟನಾ ಕಾರ್ಯದರ್ಶಿಗಳಾಗಿ ಬಿ.ಎಂ. ಚಂದ್ರಕೀರ್ತಿ ಹಾಗೂ ಕೃಷ್ಣಮೂರ್ತಿ (ಸ್ವಾನ್), ಖಜಾಂಚಿಯಾಗಿ ವಿ. ಹೇಮಂತ್ ಕುಮಾರ್ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಆರ್. ಗಿರಿರಾಜು, ಪ್ರವೀಣ್ ಜಗಾಟ, ಪದ್ಮಲತಾ ಮೋಹನ್ ಹಾಗೂ ಎ. ರಘುವೀರ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Post a Comment

Previous Post Next Post