ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಅ.22ರಂದು ರಜೆ ಘೋಷಣೆ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ವಿಸ್ತರಿಸಲಾಗಿದೆ. ಜಿಲ್ಲೆಯ 1ರಿಂದ 10ನೇ ತರಗತಿವರೆಗಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಕ್ಟೋಬರ್ 22ರಂದು ರಜೆ ಘೋಷಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದಾರೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ರಜೆ ವಿಸ್ತರಣೆಯ ನಿರ್ಧಾರ ಕೈಗೊಳ್ಳಲಾಗಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಮತ್ತೊಂದು ದಿನ ರಜೆ ದೊರೆತಂತಾಗಿದೆ. ಈ ಆದೇಶವು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸಂಬಂಧಿಸಿದೆ.

Post a Comment

Previous Post Next Post