ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆ : ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಜ್ಪೆಯ ವಿದ್ಯಾರ್ಥಿ

ಬಜ್ಪೆ: ಸಂತ ಜೋಸೆಫರ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿ ಗ್ಯಾನ್ ಚಂದ್ರ ಪೂಜಾರಿ ಅವರು ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಅವರು, “ಭಾರತದ ಇಂಧನದ ವಿವಿಧ ರೀತಿಯ ಮಿಶ್ರಣ 2047: ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ವಿಚಾರ ಮಂಡಿಸಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದರು.

ಈ ಸಾಧನೆಯ ಮೂಲಕ ಅವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದಾರೆ.

ವಿದ್ಯಾರ್ಥಿಗೆ ಕಾಲೇಜಿನ ವಿಜ್ಞಾನ ಶಿಕ್ಷಕಿ ಶಿಲ್ಪಾ ವೀಣಾ ಡಿ'ಸೋಜ ಅವರು ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದರು.

ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Post a Comment

Previous Post Next Post