ಪುತ್ತೂರು : ಸೌಜನ್ಯ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡುವ ಆದೇಶ ಹೊರಡಿಸಲಾಗಿದೆ.
ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ತಿಮರೋಡಿ ವಿರುದ್ಧ ಒಟ್ಟು 32 ಪ್ರಕರಣಗಳು ದಾಖಲಾಗಿರುವುದರಿಂದ ಕಾನೂನು ಸುವ್ಯವಸ್ಥೆ ಭಂಗವಾಗುವ ಸಾಧ್ಯತೆ ಇದೆ ಎಂಬ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಆದೇಶದಂತೆ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಕಾಲ ಗಡಿಪಾರು ಮಾಡಲಾಗಿದೆ.