ಮಂಗಳೂರು : ಅದ್ಯಪಾಡಿ ಶ್ರೀ ವೈದ್ಯನಾಥೇಶ್ವರ ಫ್ರೆಂಡ್ಸ್ ಟೈಗರ್, ಇನಾಯತ್ ಅಲಿ ಅಭಿಮಾನಿ ಬಳಗ ಸಹಯೋಗದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಇನಾಯತ್ ಅಲಿ ಸಾರಥ್ಯದಲ್ಲಿ ಗಿರೀಶ್ ಆಳ್ವ ಸಹಕಾರದೊಂದಿಗೆ ಹೊರಡುವ 16ನೇ ವರ್ಷದ ಅದ್ಯಪಾಡಿ ಪಿಲಿಯ ಊದು ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ ಸೆ.30ರಂದು ಸಂಜೆ 7 ಗಂಟೆಗೆ ಅದ್ಯಪಾಡಿ ವೈದ್ಯನಾಥೇಶ್ವರ ಭಜನಾ ಮಂಡಳಿಯಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ ಘನ ಉಪಸ್ಥಿತಿಯನ್ನು ವಹಿಸಲಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಗಿರೀಶ್ ಆಳ್ವ ಗೌರವಾಧ್ಯಕ್ಷತೆ ವಹಿಸಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಪದ್ಮರಾಜ್ ಆರ್ ಪೂಜಾರಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ. ಅ.1ರಂದು ಹುಲಿವೇಷ ಹೊರಡಲಿದೆ.
Social Plugin