ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 146 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಭಾರತ ತಂಡ 19.3 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು
ಭಾರತ ಪರ ತಿಲಕ್ ವರ್ಮ 69 ಹಾಗೂ ಶಿವಂ ದುಬೆ 33 ರನ್ ಗಳಿಸಿದರು. ಕುಲದೀಪ್ ಯಾದವ್ 4 ವಿಕೆಟ್‌ಗಳನ್ನು ಕಿತ್ತು ಪಾಕಿಸ್ತಾನದ ರನ್ ಕುಸಿತಕ್ಕೆ ಕಾರಣವಾಗಿದ್ದರು.