ಬ್ರಹ್ಮಾವರ: ಮದುವೆಗೆ ನಿರಾಕರಿಸಿದ ಕಾರಣಕ್ಕೆ ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಶುಕ್ರವಾರ ಕೊಕ್ಕರ್ಣಿಯಲ್ಲಿ ನಡೆದಿದೆ.
ಗಾಯಗೊಂಡ ಯುವತಿಯನ್ನು ರಕ್ಷಿತಾ (24) ಎಂದು ಗುರುತಿಸಲಾಗಿದ್ದು, ತೀವ್ರ ಗಾಯಗೊಂಡ ಅವಳನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ರಕ್ಷಿತಾ ಬಸ್ ನಿಲ್ದಾಣದತ್ತ ನಡೆದು ಹೋಗುತ್ತಿದ್ದಾಗ ನೆರೆ ಮನೆಯ ಯುವಕ ಕಾರ್ತಿಕ್ ಪೂಜಾರಿ ಹಠಾತ್ ಚೂರಿಯಿಂದ ಇರಿದಿದ್ದಾನೆ.
ಘಟನೆಯ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.