ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ್ದ ಮಲ್ಟಿಪ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲಿ ಗರಿಷ್ಠ ರೂ.200 ದರ ನಿಗದಿಪಡಿಸುವ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಹೊಂಬಾಳೆ ಫಿಲಂಸ‌್‌ನ ವಿಜಯ್ ಕಿರಗಂದೂರು, ಪಿವಿಆರ್ ಐನಾಕ್ಸ್ ಲಿಮಿಟೆಡ್, ವಿಕೆ ಫಿಲಂಸ್, ಕೀ ಸ್ಟೋನ್ ಎಂಟರ್‌ಟೇನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಹಲವರು ರಾಜ್ಯ ಸರ್ಕಾರದ ಆದೇಶದ ವಿರುದ್ಧ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠವು ವಿಚಾರಣೆ ನಡೆಸಿ, ಸರ್ಕಾರ ಹೊರಡಿಸಿದ್ದ ಏಕರೂಪ ದರ ಸಂಬಂಧಿತ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದೆ.