ವಿಟ್ಲ : ಕುಳ ಗ್ರಾಮದ ಕಲ್ಲಂದಡ್ಕದಲ್ಲಿ ತೆರೆದ ಕಲ್ಲಿನ ಕೋರೆಯಲ್ಲಿ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ದುರ್ಘಟನೆ ಭಾನುವಾರ ನಡೆದಿದೆ.
ಮೃತ ಬಾಲಕನನ್ನು ಕಬಕ ನಿವಾಸಿ ಹಸೈನ್ ಅವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಎನ್ನಲಾಗಿದೆ.
ಘಟನೆಯ ಸಮಯದಲ್ಲಿ ಅಜ್ಮನ್ ತನ್ನ ಸ್ನೇಹಿತರೊಂದಿಗೆ ಕೋರೆಯ ಬಳಿಗೆ ತೆರಳಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮುಳುಗಿದ್ದಾನೆ. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.