ಮೂಡುಬಿದಿರೆ : ಮಹೇಶ್ ವಿಕ್ರಂ ಹೆಗ್ಡೆ (45) ಎಂಬವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ POST CARD ಹೆಸರಿನಲ್ಲಿ, ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಬಗ್ಗೆ ಕೋಮು ಪ್ರಚೋದನಾತ್ಮಕ ಬರಹ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ, ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 143/2025 ಕಲಂ 353(2) ಬಿ.ಎನ್.ಎಸ್.ರಂತೆ ಪ್ರಕರಣ ದಾಖಲಾಗಿದೆ.
ಈ ಪ್ರಕರಣದಲ್ಲಿ ತನಿಖೆ ನಡೆಸಿದ ಮೂಡಬಿದರೆ ಪೊಲೀಸರು, ಬೆಂಗಳೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಸೆಪ್ಟೆಂಬರ್ 12ರಂದು ಮೂಡಬಿದರೆ ಸಿಜೆ ಮತ್ತು ಕೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯವು ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.