ನಮ್ಮ ವಾಟ್ಸಾಪ್ ಗುಂಪು ಸೇರಲು ಕ್ಲಿಕ್ ಮಾಡಿ

ಮಂಗಳೂರು ಸೇರಿದಂತೆ ಹಲವು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ತಮಿಳುನಾಡಿನ ವ್ಯಕ್ತಿ ಬಂಧನ

ಮಂಗಳೂರು: ಆಗಸ್ಟ್ 29ರಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಫೋನ್‌ಕಾಲ್ ಭದ್ರತಾ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿತ್ತು. ಅನಾಮಿಕ ವ್ಯಕ್ತಿ ಟರ್ಮಿನಲ್ ಬಿಲ್ಡಿಂಗ್ ಖಾಲಿ ಮಾಡದಿದ್ದರೆ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಡ್ಯೂಟಿ ಟರ್ಮಿನಲ್ ಮ್ಯಾನೇಜರ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣವನ್ನು ಮೊ.ನಂ.156/2025, ಕಲಂ 351(2), 351(3) BNS ಹಾಗೂ 1982ರ Suppression of Unlawful Acts Against Safety of Civil Aviation Act ಸೆಕ್ಷನ್ 3(1)(d) ಅಡಿಯಲ್ಲಿ ದಾಖಲಿಸಲಾಯಿತು.

ತನಿಖೆಯ ಅಂಗವಾಗಿ, ಪೊಲೀಸರು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆಯಲ್ಲಿ, ಆಪಾಧಿತನು ದೇಶದ ವಿವಿಧ ವಿಮಾನ ನಿಲ್ದಾಣಗಳ ಮೊಬೈಲ್ ಸಂಖ್ಯೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹುಡುಕಿ ಕರೆಮಾಡಿ ಬೆದರಿಕೆ ಹಾಕುತ್ತಿದ್ದನೆಂಬುದು ಪತ್ತೆಯಾಗಿದೆ. ಇದೇ ರೀತಿಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೂ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಖಾಲಿ ಮಾಡುವಂತೆ ಒತ್ತಾಯಿಸಿದ್ದನೆಂದು ತಿಳಿದುಬಂದಿದೆ.

ಬಂಧಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪ್ರಸ್ತುತ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.
Previous Post Next Post