ಮಂಗಳೂರು:ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿ ಟ್ರೆಕ್ಕಿಂಗ್ ಸಂದರ್ಭದಲ್ಲಿ ದುರ್ಘಟನೆಗೆ ಒಳಗಾಗಿ ಮೃತಪಟ್ಟ ಘಟನೆ ಬುಧವಾರ ಕೊಣಾಜೆ ಕಲ್ಲ್ ಬೆಟ್ಟದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಮಂಗಳೂರು ಕಾಲೇಜೊಂದರಲ್ಲಿ ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಪುತ್ತೂರು ಬೆಟ್ಟಂಪಾಡಿ ನಡುವಡ್ಕದ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್ ಎನ್. (22) ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಬೆಟ್ಟಾರೋಹಣಕ್ಕೆ ತೆರಳಿದ್ದಾಗ ದುರಂತ ಸಂಭವಿಸಿದೆ.
ಗುಡ್ಡ ಹತ್ತುವಾಗ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಮುನೋಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.
ಘಟನೆ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.