ಮಂಗಳೂರು: ನಾಲ್ಯಪದವು PM SHRI ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಆತಿಥೇಯ ಶಾಲೆಯ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ತೋರಿದ್ದಾರೆ.
ಬಾಲಕರ ಹಾಗೂ ಬಾಲಕಿಯರ (ಅಂಡರ್ 14 ಮತ್ತು ಅಂಡರ್ 17) ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಇವರು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಾಜರಾಗಿದ್ದ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ಆರ್ ಈಶ್ವರ್ ಅವರಿಗೆ ಶಾಲಾ ವತಿಯಿಂದ ಸನ್ಮಾನ ಸಲ್ಲಿಸಲಾಯಿತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಜಯನಂದ ಸುವರ್ಣ, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಡಾ. ಪ್ರಶಾಂತ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
SDMC ಅಧ್ಯಕ್ಷ ಕಿಶೋರ್ ಜಿ, ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್, ವಿದ್ಯಾ ದೀವಿಗೆ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ದೇವಾನಂದ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಟೋನಿ ಪಿಂಟೋ, ಹಾಗೂ ಶಾಲಾಭಿಮಾನಿಗಳು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.
ವಿದ್ಯಾರ್ಥಿಗಳ ಯಶಸ್ಸಿಗೆ ದೈಹಿಕ ಶಿಕ್ಷಣ ಶಿಕ್ಷಕಿ ರುತ್ ಕ್ಯಾಸ್ಟಲಿನೊ, ಶಿಕ್ಷಕರಾದ ವಿಲಾಸಿನಿ ಹಾಗೂ ಜಯಪ್ರಕಾಶ್, ಜೊತೆಗೆ ಹಳೆ ವಿದ್ಯಾರ್ಥಿಗಳಾದ ಮೇಘರಾಜ, ಅಭಿಷೇಕ, ಧನುಷ್, ಪೃಥ್ವಿರಾಜ ಮತ್ತು ದೀಕ್ಷಿತ ಅವರ ತರಬೇತಿ ಹಾಗೂ ಮಾರ್ಗದರ್ಶನ ಕಾರಣವಾಗಿದೆ.
ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿ, ಎಸ್‌ಡಿಎಂಸಿ, ಪೋಷಕರು, ಸ್ವಯಂಸೇವಕರಾದ ಸ್ಕೌಟ್ಸ್, ಗೈಡ್ಸ್, ಎನ್‌ಸಿಸಿ, ಸೇವಾದಳ ಸೇರಿದಂತೆ ಎಲ್ಲರಿಗೂ ಶಾಲಾ ಕುಟುಂಬ ಕೃತಜ್ಞತೆ ಸಲ್ಲಿಸಿದೆ.