ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದ ಗೌರವ ಡಾಕ್ಟರೇಟ್ ಪದವಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಭಾಜನರಾಗಿದ್ದಾರೆ.
ಸ್ಪೀಕರ್ ಅವರ ಜತೆಗೆ ಸಮಾಜ ಸೇವಕ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಡಿ. ಮಾದೇಗೌಡ ಮತ್ತು ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ-ವ್ಯವಸ್ಥಾಪಕ ನಿರ್ದೇಶಕ ಡಾ. ಟಿ.ಬಿ. ಪ್ರಸನ್ನ ಈ ಬಾರಿ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಲಿದ್ದಾರೆ.
ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ ಅಕ್ಟೋಬರ್ 8ರಂದು ಪೂರ್ವಾಹ್ನ 11.30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆಯಲಿದೆ.
Post a Comment