Top News

ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. 
ಈ ಸಂದರ್ಭದಲ್ಲಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ದ.ಕ. ಜಿಲ್ಲಾ ಕಾಂಗ್ರೆಸ್ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದೇವಳ ಅಭಿವೃದ್ಧಿ ಸಮಿತಿ ಸದಸ್ಯ ಜಯರಾಮ್ ಕಾರಂದೂರು, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪ್ರಮುಖರಾದ ಯೋಗೀಶ್ ಮುಲ್ಕಿ, ವಿಜಯ್ ಕುಮಾರ್ ಸೊರಕೆ, ರಾಜೇಂದ್ರ ಚಿಲಿಂಬಿ ಮತ್ತಿತರರು ಹಾಜರಿದ್ದರು.

Post a Comment

Previous Post Next Post