ಮಂಗಳೂರು: ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ಖ್ಯಾತ ಹಾಸ್ಯನಟ, ರಂಗಭೂಮಿ ಕಲಾವಿದ ಮತ್ತು ರಂಗಕರ್ಮಿ ರಾಜು ತಾಳಿಕೋಟಿ (62) ಅವರು ಸೋಮವಾರ ಸಂಜೆ ಮಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು ಎಂದು ಅವರ ಪುತ್ರ ಭರತ ತಾಳಿಕೋಟಿ ತಿಳಿಸಿದ್ದಾರೆ.
ಚಿತ್ರ ಚಿತ್ರೀಕರಣಕ್ಕಾಗಿ ಮಂಗಳೂರಿನಲ್ಲಿದ್ದ ಸಂದರ್ಭದಲ್ಲಿ ಅವರಿಗೆ ನಿನ್ನೆ ರಾತ್ರಿ ಹೃದಯಾಘಾತ ಉಂಟಾಯಿತು. ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ. ಇಂದು ಸಂಜೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ರಾಜು ತಾಳಿಕೋಟಿ ಅವರು ರಂಗಭೂಮಿ, ಟಿವಿ ಮತ್ತು ಚಲನಚಿತ್ರ ಕ್ಷೇತ್ರಗಳಲ್ಲಿ ಹಾಸ್ಯ ಕಲಾವಿದರಾಗಿ ವಿಶಿಷ್ಟ ಗುರುತಿಸಿಕೊಂಡಿದ್ದರು. ಧಾರವಾಡ ರಂಗಾಯಣದ ನಿರ್ದೇಶಕರಾಗಿ ಅವರು ಅನೇಕ ನಾಟಕಗಳ ಮೂಲಕ ಯುವ ರಂಗಕರ್ಮಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಅವರ ಅಂತ್ಯಕ್ರಿಯೆ ನಾಳೆ (ಮಂಗಳವಾರ) ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ
Post a Comment