Top News

ಅಂಬ್ಯುಲೆನ್ಸ್‌ಗೆ ದಾರಿ ಬಿಡದೆ ಅಡ್ಡಿಪಡಿಸಿದ ಸ್ಕೂಟಿ ಸವಾರನನ್ನು ವಶಕ್ಕೆ ಪಡೆದ ಪೊಲೀಸರು

ಬಿಸಿಲೆಘಾಟ್‌ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ತರಲಾಗಿತ್ತು. ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಲು KA-22-C-1382 ಸಂಖ್ಯೆಯ ಅಂಬ್ಯುಲೆನ್ಸ್‌ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ರವಾನಿಸಿದರು.

ಮಧ್ಯಾಹ್ನ ಸುಮಾರು 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್‌ಜಿ ಸರ್ಕಲ್ ಬಳಿ ಅಂಬ್ಯುಲೆನ್ಸ್ ಸಾಗುತ್ತಿರುವ ವೇಳೆ, KA-19-EK-0696 ಸಂಖ್ಯೆಯ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್‌ನ ಸೈರನ್ ಶಬ್ದ ಕೇಳಿಯೂ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟುಮಾಡಿದರು.

ಈ ವಾಹನ ಸವಾರನನ್ನು ಮಹಮ್ಮದ್ ಮನ್ಸೂರ್ (ವಯಸ್ಸು 38), ಬೆಟ್ಟಂಪಾಡಿ ಗ್ರಾಮ, ಪುತ್ತೂರು ತಾಲೂಕು ಮೂಲದವನೆಂದು ಗುರುತಿಸಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 128/2025, ಕಲಂ 110, 125 ಬಿ.ಎನ್‌.ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Post a Comment

Previous Post Next Post