ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಎರಡೇ ದಿನಗಳಲ್ಲಿ ಪತ್ತೆಹಚ್ಚಿ, ಆರೋಪಿ ಹಾಗೂ ಕಳವಾದ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ರೇವತಿ ಅವರ ದೂರಿನಂತೆ, ದಿನಾಂಕ ಅ.12 ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯ ಒಳಗೆ ಅವರ ಮನೆಯಿಂದ ಅಪರಿಚಿತರು ಚಿನ್ನದ ಬಳೆ, ಕಿವಿಯೋಲೆ ಜೋಡಿ, ಚಿನ್ನದ ಸರ ಹಾಗೂ ನಗದು ಕಳವು ಮಾಡಿದ್ದರು.
ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪುತ್ತೂರು ನಗರ ಪೊಲೀಸರು ಆರೋಪಿ ಪ್ರವೀಣ್ (27), ಸಿಟಿ ಗುಡ್ಡೆ ಮನೆ, ಕಬಕ ಗ್ರಾಮ, ಪುತ್ತೂರು ತಾಲೂಕು ಎಂಬಾತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ತನಿಖೆ ಸಂದರ್ಭದಲ್ಲಿ ಆರೋಪಿ ಕಳವು ಮಾಡಿದ ಚಿನ್ನಾಭರಣ ಮತ್ತು ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Post a Comment