ಸುರತ್ಕಲ್ : ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿಶೀಟರ್ ಗುರುರಾಜ್ ಆಚಾರಿ ಎಂಬಾತನನ್ನು ಸುರತ್ಕಲ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡವಿ, ಕೆ.ವಿ. ಅಲೆಕ್ಸ್, ಸುರತ್ಕಲ್ ಇಂದಿರಾ ಕಟ್ಟೆ ನಿವಾಸಿ ನಿತಿನ್ (26) ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದ ಕುಳಾಯಿ ಹೊನ್ನಕಟ್ಟೆ ನಿವಾಸಿ ಅರುಣ್ ಶೆಟ್ಟಿ ಎಂಬವರನ್ನು ಪೊಲೀಸರು ಶುಕ್ರವಾರವೇ ಬಂಧಿಸಿದ್ದರು.
ಮುಖ್ಯ ಆರೋಪಿ ಗುರುರಾಜ್ ಆಚಾರಿ ಮತ್ತು ಅಶೋಕ್ ಎಂಬವರು ಘಟನೆ ಬಳಿಕ ತಲೆಮರೆಸಿಕೊಂಡಿದ್ದರು. ಸದ್ಯ ಗುರುರಾಜ್‌ನ್ನು ಬಂಧಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಅಶೋಕ್‌ನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಗುರುವಾರ ರಾತ್ರಿ ಹಸನ್ ಮುಖೀದ್ ಮತ್ತು ನಿಝಾಮ್ ಎಂಬ ಯುವಕರ ಮೇಲೆ ಕ್ಷುಲ್ಲಕ ಕಾರಣಕ್ಕೆ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದರು. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
Post a Comment