Top News

surathka : ಸುರತ್ಕಲ್ ಕಾನಾದಲ್ಲಿ ಯುವಕರಿಗೆ ಇರಿತ ; ನಾಲ್ವರು ಬಂಧನ, ಇಬ್ಬರು ಆರೋಪಿಗಳಿಗಾಗಿ ಶೋಧ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾ ಪ್ರದೇಶದಲ್ಲಿ ಇಬ್ಬರು ಯುವಕರಿಗೆ ಚೂರಿಯಿಂದ ಇರಿದು ಕೊಲೆ ಯತ್ನ ಮಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಅಕ್ಟೋಬರ್ 23ರಂದು ರಾತ್ರಿ 10.30ರ ಸುಮಾರಿಗೆ ಕಾನಾದ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರ ಮೇಲೆ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಇರಿತ ನಡೆಸಿದ್ದರು.

ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಸುಶಾಂತ್ @ ಕಡವಿ (29), ಕೆ.ವಿ. ಅಲೆಕ್ಸ್ (27), ನಿತಿನ್ (26) ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದ ಆರುಣ್ ಶೆಟ್ಟಿ (56) ಎಂಬವರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಗುರುರಾಜ್ ಆಚಾರಿ ಮತ್ತು ಆಶ್ರಯ ನೀಡಿದ ಅಶೋಕ್ ಪರಾರಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

ತನಿಖೆ ಉಪ ಪೊಲೀಸ್ ಆಯುಕ್ತ (ಅಪರಾಧ ಮತ್ತು ಸಂಚಾರ) ರವಿಶಂಕರ್ ಅವರ ನಿರ್ದೇಶನದಲ್ಲಿ, ಸಹಾಯಕ ಪೊಲೀಸ್ ಆಯುಕ್ತ (ಉತ್ತರ ಉಪ ವಿಭಾಗ) ಶ್ರೀಕಾಂತ್ ಕೆ ಅವರ ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಅವರ ನೇತೃತ್ವದಲ್ಲಿ ನಡೆದಿದ್ದು, ಸಿಸಿಬಿ ಘಟಕ, ಎಸ್‌ಎಎಫ್ ತಂಡ ಮತ್ತು ಶ್ವಾನ ದಳದ ಸಹಕಾರದಿಂದ ಕಾರ್ಯಾಚರಣೆ ನಡೆಸಲಾಗಿದೆ.

Post a Comment

Previous Post Next Post