ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನವೆಂಬರ್ 28ರಂದು ನಡೆಯುವ ‘ಲಕ್ಷ ಕಂಠ ಗೀತಾ’ ಮಹೋತ್ಸವದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿ, ಶ್ರೀಕೃಷ್ಣನ ಸನ್ನಿಧಿಯಲ್ಲಿ ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ.
ಸುಮಾರು ಒಂದು ಲಕ್ಷ ಭಕ್ತರ ಸಮ್ಮುಖದಲ್ಲಿ ನಡೆಯುವ ಈ ವಿಶಾಲ ಗೀತಾ ಪಠಣವು ಉಡುಪಿ ಮಠದ ಇತಿಹಾಸದಲ್ಲೇ ಅತಿದೊಡ್ಡ ಧಾರ್ಮಿಕ ಸಮಾರಂಭಗಳಲ್ಲಿ ಒಂದಾಗಲಿದೆ.
ಶನಿವಾರದಿಂದ ಆರಂಭವಾಗುವ ಒಂದು ತಿಂಗಳ ಬೃಹತ್ ಗೀತೋತ್ಸವ ಕಾರ್ಯಕ್ರಮಕ್ಕೆ ಶ್ರೀಕೃಷ್ಣ ಮಠದ ವಿಶ್ವಸ್ಥರಾದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದ ಅಂತ್ಯದಲ್ಲಿ ಪ್ರಧಾನಿಗೆ ವಿಶೇಷ ಸನ್ಮಾನ ನೆರವೇರಲಿದೆ. ನ.30ರಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಉಡುಪಿ ಭೇಟಿ ನೀಡಿ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment