ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025–28ರ ಅವಧಿಗೆ ಹೊಸ ಆಡಳಿತ ಮಂಡಳಿ ಆಯ್ಕೆಯಾಗಿದೆ. ಭಾನುವಾರ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಪುಷ್ಪರಾಜ್ B.N. ಅವರು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು.
ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಕೆ. ಪೂಜಾರಿ ಹಾಗೂ ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಪಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 352 ಮತದಾರರಲ್ಲಿ 331 ಮಂದಿ ಮತ ಚಲಾಯಿಸಿದ ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶ್ರವಣ ಕುಮಾರ್ ಪರಾಭವಗೊಂಡಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಮುಹಮ್ಮದ್ ಆರಿಫ್ ಪಡುಬಿದ್ರೆ, ವಿಲ್ಫ್ರೆಡ್ ಡಿ’ಸೋಜ ಮತ್ತು ರಾಜೇಶ್ ಶೆಟ್ಟಿ ಆಯ್ಕೆಯಾಗಿದ್ದು, ಇವರ ವಿರುದ್ಧ ಸ್ಪರ್ಧಿಸಿದ್ದ I.B. ಸಂದೀಪ್ ಕುಮಾರ್ ಮತ್ತು ಗಂಗಾಧರ ಕಲ್ಲಪಳ್ಳಿ ಪರಾಭವಗೊಂಡಿದ್ದಾರೆ.
ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಇರಾ, ಸಿದ್ದಿಕ್ ನೀರಾಜೆ, ಸುರೇಶ್ ಡಿ. ಪಳ್ಳಿ ಆಯ್ಕೆಯಾಗಿದ್ದು, ರಾಜೇಶ್ ದಡ್ಡಂಗಡಿ ಸೋಲನುಭವಿಸಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಶೋಕ್ ಶೆಟ್ಟಿ B.N., ಸಂದೇಶ್ ಜಾರ, ಸಂದೀಪ್ ಕುಮಾರ್, ಲಕ್ಷ್ಮೀನಾರಾಯಣ, ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ, ಕಿರಣ್ ಸಿರ್ಸಿಕರ, ಅಭಿಷೇಕ್ H.S., ಜಯಶ್ರೀ, ಭುವನೇಶ್ವರ, ಸಂದೀಪ್ ವಾಗ್ಲೆ, ಹರೀಶ್ K. ಆದೂರು, ಗಿರೀಶ್ ಅಡ್ಪಂಗಾಯ, ಸಂದೀಪ್ ಸಾಲ್ಯಾನ್ ಮತ್ತು ಆರಿಫ್ ಕಲ್ಕಟ್ಟ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಒಂದು ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ರೀನಿವಾಸ್ ನಾಯಕ್ ಇಂದಾಜೆ ಆಯ್ಕೆಯಾದರು. ಅವರ ಪ್ರತಿಸ್ಪರ್ಧಿ ಅನ್ಸಾರ್ ಇನೋಳಿ ಸೋತಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಚುನಾವಣಾ ಅಧಿಕಾರಿಯಾಗಿ ನಿರ್ವಹಿಸಿದರು.
Post a Comment