ಫುಟ್‌ಬಾಲ್ : ಬಜಪೆ ಸಂತ ಜೋಸೆಫ್ ಪಿಯು ಕಾಲೇಜ್‌ನ ಮೂವರು ಪೌಢಶಾಲಾ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಡಿಕೇರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕೊಡಗು ಜಿಲ್ಲಾ ಉಪ ನಿರ್ದೇಶಕರ ಕಚೇರಿ ಸಹಯೋಗದಲ್ಲಿ ನಡೆದ 17 ವರ್ಷ ವಯೋಮಿತಿಯ ಬಾಲಕಿಯರ ರಾಜ್ಯಮಟ್ಟದ ಫುಟ್ಬಾಲ್ ಟೂರ್ನಿಯಲ್ಲಿ ಮೈಸೂರು ವಿಭಾಗದ ತಂಡವು ಚಾಂಪಿಯನ್ ಆಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

ಈ ತಂಡದಲ್ಲಿ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು, ಬಜ್ಪೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಾದ ಲಿವ್ಯಾ ಡಿ’ಮೆಲ್ಲೋ, ಶೈನಾ ಕುವೆಲ್ಲೊ ಮತ್ತು ಶ್ರೇಯಾ ಉತ್ತಮ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸಂತೋಷ್ ಮಸ್ಕರೇನಸ್ ತರಬೇತಿ ನೀಡಿದ್ದಾರೆ.

ಈ ಮೂವರು ಆಟಗಾರ್ತಿಯರು ಡಿಸೆಂಬರ್ ಮೂರನೇ ವಾರದಲ್ಲಿ ಜಾರ್ಖಂಡ್‌ನ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

Post a Comment

Previous Post Next Post