ಕಡಬ : ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯ ಬಂಧನ

ಮನೆಯ ಹೊರಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಕಡಬ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಆರೋಪಿಯನ್ನು ಉಮೇಶ್ ಗೌಡ ಎಂದು ಗುರುತಿಸಲಾಗಿದ್ದು, ಮಹಿಳೆಯೂ ಕೊಟ್ಟಿಗೆಯಲ್ಲಿ ಮಲಗಿದ್ದ ಸಂದರ್ಭ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Post a Comment

Previous Post Next Post