Top News

ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಾಟ ; ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪಿಯು ಕಾಲೇಜ್ ವಿನ್ನರ್ಸ್

ಮಂಗಳೂರು : ಮುಲ್ಕಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಜಂಟಿ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಮೈದಾನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಾಟದಲ್ಲಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾರ್ಥಿಗಳು ವಿಜೇತರಾಗಿ ಹೊರ ಹೊಮ್ಮಿದ್ದು, ಗದಗದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜ್‌ನ ದೈಹಿಕ ಶಿಕ್ಷಣ ನಿರ್ದೇಶಕರಾದ ನವೀನ್ ಅವರು ತರಬೇತಿಯನ್ನು ನೀಡುತ್ತಿದ್ದಾರೆ.
ಬಾಲಕರ ವಿಭಾಗದಲ್ಲಿ ಬೆಸೆಂಟ್ ಪಿಯು ಕಾಲೇಜ್ ಮಂಗಳೂರು ಹಾಗೂ ಬಾಲಕಿಯರ ವಿಭಾಗದಲ್ಲಿ ಸುಬ್ರಹ್ಮಣ್ಯ ಪಿಯು ಕಾಲೇಜ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

Post a Comment

Previous Post Next Post