ಬಜಪೆ : ನಗರದ ಹೊರವಲಯದ ಬಜಪೆಯ ಸೌಹಾರ್ದ ನಗರದಲ್ಲಿ ಆರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಗುರುವಾರ ನಡೆದಿದೆ. ಮದರಸದಿಂದ ಮನೆಗೆ ಹಿಂತಿರುಗುತ್ತಿದ್ದ ಅಹಿಲ್ ಎಂಬ ಬಾಲಕನ ಮೇಲೆ ನಾಯಿ ಏಕಾಏಕಿ ದಾಳಿ ನಡೆಸಿ ತೀವ್ರ ಗಾಯಪಡಿಸಿದೆ.
ಗಾಯಗೊಂಡ ಬಾಲಕನನ್ನು ತಕ್ಷಣವೇ ಬಜಪೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಕಟೀಲ್ ದುರ್ಗ ಸಂಜೀವಿನಿ ಹಾಗೂ ನಂತರ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಸ್ಥಳೀಯರ ಪ್ರಕಾರ, ಕಳೆದ 2023ರಿಂದ ಕಂದಾವರ ಗ್ರಾಮ ಪಂಚಾಯತ್‌ಗೆ ಬೀದಿ ನಾಯಿಗಳ ಹಾವಳಿ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದಾಗಿ ಆರೋಪಿಸಲಾಗಿದೆ.
ಪೋಷಕರು ಮತ್ತು ಸ್ಥಳೀಯರು ಆಡಳಿತದ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಕ್ಕಳ ಸುರಕ್ಷತೆಗಾಗಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಬೀದಿ ನಾಯಿಗಳ ಸಂಖ್ಯೆಯ ಹೆಚ್ಚಳ ಮತ್ತು ನಿಯಂತ್ರಣದ ಕೊರತೆಯಿಂದ ಈ ಪ್ರದೇಶದಲ್ಲಿ ಜನರ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.
Post a Comment