ಪುತ್ತೂರು : ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.
ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿಯ ದಿ. ವಾಲ್ಕರ್ ರೋಡ್ರಿಗಸ್ ಅವರ ಪುತ್ರ ಚೇತನ್ (29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪದವಿ ಮುಗಿಸಿಕೊಂಡಿದ್ದ ಚೇತನ್ ಮನೆಯಲ್ಲಿ ಕೃಷಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಈ ಬಗ್ಗೆ ವುತ್ತೂರಿನ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬುಧವಾರ ಬೆಳಿಗ್ಗೆ ಶಿಕ್ಷಕಿಯಾಗಿರುವ ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದಿದ್ದ ಚೇತನ್ ಮನೆಗೆ ಬಂದ ಬಳಿಕ ನೇಣಿಗೆ ಶರಣಾಗಿದ್ದಾನೆ. ಮಧ್ಯಾಹ್ನ ತಾಯಿ ದೂರವಾಣಿ ಕರೆ ಮಾಡಿದರೂ ಪ್ರತಿಕ್ರಿಯಿಸದಿದ್ದ ಹಿನ್ನೆಲೆಯಲ್ಲಿ, ಮನೆಯ ಬಳಿಯವರಿಗೆ ವಿಚಾರಿಸಲು ಕರೆ ಮಾಡಿದ್ದರು. ಅವರು ಮನೆಯತ್ತ ಬಂದಾಗ ಕೋಣೆಯ ಬಾಗಿಲಿಗೆ ಚಿಲಕ ಹಾಕಿರುವುದು ಗಮನಕ್ಕೆ ಬಂತು. ಕಿಟಕಿಯಿಂದ ನೋಡಿದಾಗ ಮ ಚೇತನ್ ಫ್ಯಾನಿಗೆ ನೇಣು ಬಿಗಿದು ನೇತಾಡುತ್ತಿರುವುದು ಕಾಣಿಸಿಕೊಂಡಿದೆ.
ಈ ಸಂಬಂಧ ತಾಯಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Post a Comment