ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ನಾಟಕ ಗೋಹತ್ಯೆ ನಿಷೇಧ ಹಾಗೂ ಜಾನುವಾರು ಸಂರಕ್ಷಣಾ ಕಾಯಿದೆ – 2020 ಮತ್ತು ಕಲಂ 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆ ಅಡಿ ದಾಖಲಾಗಿದ್ದ ಪ್ರಕರಣದ ಅಡಿಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ತನಿಖೆಯ ವೇಳೆ ಆರೋಪಿಗಳಾದ ಇಬ್ರಾಹಿಂ ಖಲೀಲ @ ತೌಸಿಫ್ ಎಂಬಾತನು ಅಕ್ರಮವಾಗಿ ಜಾನುವಾರುಗಳನ್ನು ಮಾಂಸ ಮಾಡಲು ಉದ್ದೇಶಿಸಿದ ಸಜೀಪನಡು ಗ್ರಾಮದ ತಂಚಿಬೆಟ್ಟು ಪ್ರದೇಶದಲ್ಲಿರುವ ಮನೆಯನ್ನು ಹಾಗೂ ಮತ್ತೊಬ್ಬ ಆರೋಪಿ ಮಹಮ್ಮದ್ ಸಿನಾನ್ ಎಂಬಾತನು ಮಾಂಸ ಇಡಲು ಉದ್ದೇಶಿಸಿದ ಸಜಿಪಪಡು ಗ್ರಾಮದ ಕೋಟೆಕಣಿ ಪ್ರದೇಶದಲ್ಲಿರುವ ಕೋಣೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
Post a Comment