ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸಿ, ಅಪಾಯಕಾರಿಯಾಗಿ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದು, ಈ ಹಿನ್ನಲೆಯಲ್ಲಿ ವಾಹನಕ್ಕೆ ಸಂಚಾರ ನಿಯಮದ ಅನ್ವಯ ದಂಡ ವಿಧಿಸಲಾಗಿದೆ.
ಜಿಲ್ಲೆಯ ಠಾಣಾ ವ್ಯಾಪ್ತಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ವಾಹನ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆ, ವಾಹನ ಚಾಲನೆಯ ವೇಳೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಇತರೆ ಅಗತ್ಯ ಮಾಹಿತಿಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಪ್ರಕಟಣೆ ತಿಳಿಸಿದೆ.
Post a Comment