ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪಾರ್ವತಿ ಸಿದ್ದರಾಮಯ್ಯ ಅವರಿಗೆ ಶ್ವಾಸಕೋಶ ಸಂಬಂಧಿತ ತೊಂದರೆ ಕಾಣಿಸಿಕೊಂಡಿದ್ದು, ಆಸ್ಪತ್ರೆಯ ತಜ್ಞರ ತಂಡ ತುರ್ತು ಚಿಕಿತ್ಸೆಯನ್ನು ನೀಡುತ್ತಿದೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ನಿಗಾದೀತವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಮಾಹಿತಿ ತಿಳಿದ ತಕ್ಷಣ ದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮದಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪ್ರವಾಸವನ್ನು ಮಧ್ಯೆಯೇ ನಿಲ್ಲಿಸಿ ತುರ್ತುವಾಗಿ ಬೆಂಗಳೂರಿಗೆ ಹೊರಟಿದ್ದಾರೆ. ಅವರು ಇನ್ನೂ ಕೆಲವು ಗಂಟೆಗಳಲ್ಲಿ ತಲುಪುವ ನಿರೀಕ್ಷೆಯಿದೆ. ತಲುಪಿದ ನಂತರ ಅವರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮುಂದೆ ಲಭ್ಯವಾಗುವ ನಿರೀಕ್ಷೆಯಿದೆ.
Post a Comment