ICT-BD sentences former Bangladesh Prime Minister Sheikh Hasina to death in student riot suppression case
ಢಾಕಾ: ಕಳೆದ ವರ್ಷ (2024) ನಡೆದ ವಿದ್ಯಾರ್ಥಿಗಳ ದಂಗೆ ಹತ್ತಿಕ್ಕುವ ಸಂದರ್ಭ ಮಾರಣಾಂತಿಕ ದಾಳಿ ನಡೆಸಿದ ಆರೋಪದ ಮೇರೆಗೆ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಸೋಮವಾರ ಮರಣದಂಡನೆ ವಿಧಿಸಿದೆ.
ವಿದ್ಯಾರ್ಥಿ ಚಳುವಳಿಯನ್ನು ದಮನಗೊಳಿಸಲು ಭದ್ರತಾ ಪಡೆಗಳಿಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ, ಮಾಜಿ ಗೃಹ ಸಚಿವ ಅಸಾದುಜ್ಜಾಮಾನ್ ಖಾನ್ ಕಮಲ್ ಹಾಗೂ ಮಾಜಿ ಐಜಿಪಿ ಚೌಧರಿ ಅಬ್ದುಲ್ಲಾ ಅಲ್-ಮುಮುನ್ ಸೇರಿದಂತೆ ಮೂವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. 54 ಸಾಕ್ಷಿಗಳ ಹೇಳಿಕೆಗಳನ್ನು ಪರಿಶೀಲಿಸಿದ ನಂತರ ನ್ಯಾಯಮಂಡಳಿ ವಿಚಾರಣೆಯನ್ನು ಪೂರ್ಣಗೊಳಿಸಿ ಇಂದು ತೀರ್ಪು ಪ್ರಕಟಿಸಿತು.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ನೀಡಿರುವ ವರದಿ ಪ್ರಕಾರ, 2024ರ ಜುಲೈ 15ರಿಂದ ಆಗಸ್ಟ್ 15ರವರೆಗೆ ನಡೆದ ಅಶಾಂತಿಯಲ್ಲಿ 1,400ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ತೀರ್ಪಿನ ಹಿನ್ನೆಲೆ ದೇಶಾದ್ಯಂತ ಭದ್ರತೆ ಬಿಗಿಗೊಳಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ಸೇನಾ ಪಡೆ, ಬಾಂಗ್ಲಾದೇಶ ಗಡಿ ಭದ್ರತಾ ಪಡೆ ಹಾಗೂ ಅರೆಸೇನಾ ಘಟಕಗಳನ್ನು ಢಾಕಾದ ಪ್ರಮುಖ ಸ್ಥಳಗಳಲ್ಲಿ ಕಣ್ಣಾವಲಿಗೆ ನಿಯೋಜಿಸಲಾಗಿದೆ.
ಇದೇ ವೇಳೆ, ಹಿಂಸಾತ್ಮಕ ಪ್ರತಿಭಟನೆ ನಡೆಸುವವರ ವಿರುದ್ಧ 'ಕಂಡಲ್ಲಿ ಗುಂಡು ಹಾರಿಸುವ' ಆದೇಶ ಹೊರಡಿಸಿರುವುದಾಗಿ ಮೂಲಗಳು ತಿಳಿಸಿವೆ.
Post a Comment