KickBoxing : ಮಂಗಳೂರಿನಲ್ಲಿ ರಾಜ್ಯಮಟ್ಟದ ಖೆಲೋ ಇಂಡಿಯಾ ಅಸ್ಮಿತಾ ಕಿಕ್ ಬಾಕ್ಸಿಂಗ್ ವಿಮೆನ್ಸ್ ಟೂರ್ನಮೆಂಟ್

ಮಂಗಳೂರು : ಅಧುನಿಕ ಮಾರ್ಷಲ್ ಆರ್ಟ್ಸ್ ಕಲೆಗಳಲ್ಲೊಂದು ಆಗಿರುವ ಕಿಕ್‌ಬಾಕ್ಸಿಂಗ್ ಕ್ರೀಡೆಗೆ ಭಾರತೀಯ ಕ್ರೀಡಾ ಪ್ರಾಧಿಕಾರ ಹಾಗೂ ಭಾರತ ಸರ್ಕಾರ ಮಾನ್ಯತೆ ನೀಡಿರುವ ಹಿನ್ನೆಲೆಯಲ್ಲಿ, ಈ ವರ್ಷ ಖೇಲೋ ಇಂಡಿಯಾ ಕಾರ್ಯಕ್ರಮದಡಿ ಹೆಣ್ಣು ಮಕ್ಕಳಿಗಾಗಿಯೇ ರಾಷ್ಟ್ರೀಯ ಮಟ್ಟದ ಆಯ್ಕೆ ಸ್ಪರ್ಧೆಗಳು ASMITA ಯೋಜನೆಯಡಿ ನಡೆಯುತ್ತಿವೆ.

ಈ ಹಿನ್ನೆಲೆಯಲ್ಲಿ, ನಗರ/ಜಿಲ್ಲಾ ಮಟ್ಟದ ವಿಜೇತರಿಗೆ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜನೆ ಮಾಡುವ ಮಹತ್ವದ ಜವಾಬ್ದಾರಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೀಡಲಾಗಿದೆ. ಕೇವಲ ಐದು ವರ್ಷಗಳಲ್ಲಿ ರಾಜ್ಯವನ್ನು ದೇಶದ ಅಗ್ರ 8 ತಂಡಗಳ ಸಾಲಿನಲ್ಲಿ ನಿಲ್ಲಿಸಿದ ಸಾಧನೆಯ ಹಿನ್ನೆಲೆಯಲ್ಲಿ ಈ ಗೌರವ ಸಿಕ್ಕಿರುವುದಾಗಿ ದಕ್ಷಿಣ ಕನ್ನಡ ಕಿಕ್‌ಬಾಕ್ಸಿಂಗ್ ಅಸೋಸಿಯೇಷನ್ ಚೇರ್ಮನ್ ಸತ್ಯಜಿತ್ ಸುರತ್ಕಲ್ ಅವರು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.
ರಾಜ್ಯ ಮಟ್ಟದ ಕ್ರೀಡಾಕೂಟ ನ.23, ರವಿವಾರ ಮಂಗಳೂರಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಉದ್ಘಾಟನೆಯನ್ನು ವಿಧಾನಸಭಾ ಮಾಜಿ ಸ್ಪೀಕರ್ ಯು.ಟಿ. ಖಾದರ್ ನೆರವೇರಿಸಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಿಲ್ಲೆಯಿಂದ ರಾಷ್ಟ್ರೀಯ–ಅಂತಾರಾಷ್ಟ್ರೀಯ ಮಟ್ಟದ ಅನೇಕ ಪದಕ ವಿಜೇತರನ್ನು ನೀಡಿದ್ದು ಹೆಮ್ಮೆಯ ವಿಷಯವಾಗಿದ್ದು, ಮಂಗಳೂರಿನಲ್ಲಿ ಆಯೋಜನೆಯಾಗುತ್ತಿರುವ ಈ ಕ್ರೀಡಾಕೂಟ ಜಿಲ್ಲೆಯ ಹೆಚ್ಚಿನ ಕ್ರೀಡಾಪಟುಗಳನ್ನು ಕ್ರೀಡೆಗೆ ಆಕರ್ಷಿಸಲಿದ್ದು, ಇತರ ಮಾರ್ಷಲ್ ಆರ್ಟ್ಸ್ ಸಂಸ್ಥೆಗಳಿಗೂ ಪ್ರೋತ್ಸಾಹವಾಗಲಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ನಿತಿನ್ ಎನ್.ಸುವರ್ಣ, ಕಾರ್ಯದರ್ಶಿ ಸಂಪತ್ ಕುಮಾರ್, ಐಕೆಎಂಏ ಶಿಕ್ಷಕ ಶಿವಪ್ರಸಾದ್, ಅಂತಾರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಆಟಗಾರ ರಾಜೇಶ್ ಕೆ., ಐಕೆಎಂಏ ಸದಸ್ಯ ನಿರಂಜನ ಎಂ. ಉಪಸ್ಥಿತರಿದ್ದರು.

Post a Comment

Previous Post Next Post