ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್‌ನ ವತಿಯಿಂದ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ ಸೋಮವಾರ ಮೂಡುಶೆಡ್ಡೆ ಪ್ರೌಢ ಶಾಲೆಯಲ್ಲಿ ನಡೆಯಿತು.
ಸಖಿ ಒನ್ ಸೆಂಟರ್‌ನ ನಿರ್ದೇಶಕರಾದ ಪ್ರಿಯಾ ರಾಜಮೋಹನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯಿದೆ ಹಾಗೂ ಅಸುರಕ್ಷಿತ ಒಡನಾಟಗಳ ಕುರಿತು ಜಾಗೃತಿಯನ್ನು ಮೂಡಿಸಿದರು.
ಮೂಡುಶೆಡ್ಡೆ ಸರಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯರಾಮ್ ಕೊಟ್ಟಾರಿ, ಶ್ರೀ ದುರ್ಗಾ ಜನರಲ್ ಸ್ಟೋರ್ ಮಾಲಕರಾದ ಲಕ್ಷ್ಮೀ ನಾರಾಯಣ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕಿ ವಿಲ್ಮಾ ಮಸ್ಕರೇನಸ್, ಪತ್ರಕರ್ತ ಸಂದೇಶ್ ಜಾರ, ಪ್ರಸಾದ್ ಕೊಳಂಬೆ, ಗಣೇಶ್ ಅದ್ಯಪಾಡಿ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಕರಾದ ಶಿಲ್ಪಾ ಸ್ವಾಗತಿಸಿ, ಶಾರದಾ ನಿರೂಪಿಸಿದರು. ಸೌಮ್ಯ ವಂದಿಸಿದರು.
Post a Comment