Top News

ಒಡಿಲ್ನಾಳ : 15 ವರ್ಷದ ಸುಮಂತ್ ಘಟನೆ ; ಕೊಲೆ ಪ್ರಕರಣವಾಗಿ ಪರಿವರ್ತನೆ, ನಾಲ್ಕು ವಿಶೇಷ ತಂಡಗಳಿಂದ ತನಿಖೆ

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ಸಂಭವಿಸಿದ 15 ವರ್ಷದ ಸುಮಂತ್ ಸಾವಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಮೃತನ ಶವಪರೀಕ್ಷೆಯ ನಂತರ ಲಭಿಸಿದ ಪ್ರಾಥಮಿಕ ವರದಿ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವು ಎಂದು ದೃಢಪಟ್ಟಿದೆ.
ಶವಪರೀಕ್ಷಾ ವರದಿಯಲ್ಲಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯಗಳು (Blunt injury) ಆಗಿದ್ದು, ಯಾವುದೇ ಚೂಪಾದ (Sharp) ಆಯುಧಗಳಿಂದ ಆಗಿರುವ ಗಾಯಗಳಲ್ಲ ಎಂದು ತಿಳಿದುಬಂದಿದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ಹಾಗೂ ಸ್ಪಷ್ಟವಾದ ವಿವರಣೆ ದೊರಕದ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಸಂಶಯಗಳು ಮೂಡಿವೆ.
ಈ ಹಿನ್ನೆಲೆ, ಪ್ರಕರಣದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಇದನ್ನು ಅಸಹಜ ಸಾವು ಪ್ರಕರಣದಿಂದ ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ಕೈಗೊಳ್ಳಲಾಗಿದೆ. ಪ್ರಕರಣದ ತನಿಖೆಗೆ ಬೆಳ್ತಂಗಡಿ ಡಿಎಸ್‌ಪಿ ಅವರ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಎಲ್ಲ ಆಯಾಮಗಳಿಂದ ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Post a Comment

Previous Post Next Post