ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ.11ರಂದು ಸಂಜೆ ಸುಮಾರು 6.05ರ ವೇಳೆಗೆ ನಾಲ್ವರು ಆರೋಪಿತರು ದಿಲ್ಜಾನ್ ಅನ್ಸಾರಿ ಎನ್ನುವ ಕಾರ್ಮಿಕನನ್ನು ತಡೆದು ನಿಲ್ಲಿಸಿ “ನೀನು ಹಿಂದೂನಾ, ಮುಸ್ಲಿಂನಾ” ಎಂದು ಪ್ರಶ್ನಿಸಿ, ಬಾಂಗ್ಲಾದೇಶದವನು ಎಂದು ಅವಾಚ್ಯ ಶಬ್ದಗಳಿಂದ ಬೈದು ಸಾರಣಿ ಮಾಡುವ ಕರಣಿ (ತಾಪಿ) ಯಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಾಗಿ ಕೂಳೂರು ನಿವಾಸಿಗಳಾದ ರತೀಶ್ ದಾಸ್ (32) ಧನುಷ್ (24), ರಾಯಕಟ್ಟೆಯ ಸಾಗರ್ (24) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎ.ಸಿ.ಪಿ) ಶ್ರೀಕಾಂತ್ ಕೆ. ಅವರ ಮಾರ್ಗದರ್ಶನದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಶ್ರೀ ರಾಘವೇಂದ್ರ ಎಂ. ಬೈಂದೂರು, ಪೊಲೀಸ್ ಉಪ-ನಿರೀಕ್ಷಕ ಶ್ರೀ ಮಲ್ಲಿಕಾರ್ಜುನ ಬಿರಾದಾರ ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ ಚಂದ್ರಹಾಸ್, ಹೆಚ್.ಸಿ ಬಾಲಕೃಷ್ಣ ಸೇರಿದಂತೆ ರಾಘವೇಂದ್ರ, ರಿಯಾಜ್, ನಾಗರಾಜ್, ಹನುಮಂತ ಅವರ ತಂಡ ಆರೋಪಿಗಳನ್ನು ಪತ್ತೆಮಾಡಿ ದಸ್ತಗಿರಿ ಮಾಡಿದೆ.
ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.
Post a Comment