ಉತ್ತರ ಕನ್ನಡ : ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಪುರೋಹಿತ ವೃತ್ತಿಯನ್ನು ಮಾಡಿಕೊಂಡಿದ್ದ ಯುವಕನೋರ್ವ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆದಿದೆ.
ಅಸ್ಲಗದ್ದೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಪವನ್ ಭಟ್ (24) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದಿಗೆ ಪ್ರೀತಿ ಹೊಂದಿದ್ದ ಎನ್ನಲಾಗಿದೆ. ಈ ಸಂಬಂಧವನ್ನು ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ. ಈ ನಿರಾಕರಣೆಯಿಂದ ಮನನೊಂದ ಪವನ್ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆ ಕುರಿತು ಮಾಹಿತಿ ಪಡೆದ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Post a Comment