ಬೆಳ್ಳಾರೆ ಪಟ್ಟಣದ ಕಲ್ಲೋಣಿ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಮೋರಿಯೊಳಗೆ ಬಿದ್ದು ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಉರುಳಿದ ಪರಿಣಾಮ ಈ ಅವಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮಾಹಿತಿ ಪಡೆದ ಬೆಳ್ಳಾರೆ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Post a Comment