ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಕೇರಳ ಮೂಲದ ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ರಿಯಲ್ ಎಸ್ಟೇಟ್ ಕಂಪನಿಯ ಸಂಸ್ಥಾಪಕರಾಗಿದ್ದರು. ಇಂದು ಸಂಜೆ ಆನೇಪಾಳ್ಯದಲ್ಲಿರುವ ತಮ್ಮ ಕಚೇರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ತಮ್ಮ ಕುಟುಂಬದ ಮೇಲೆ ಪದೇಪದೇ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದ್ದ ಹಿನ್ನೆಲೆ ಆತಂಕಗೊಂಡು ರಾಯ್ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಇಂದು ಸಹ ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ, ಪಿಸ್ತೂಲ್‌ನಿಂದ ತಾನೇ ಶೂಟ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಘಟನೆ ತಿಳಿದ ತಕ್ಷಣ ಅಶೋಕನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
Post a Comment