Top News

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ನಿಂದಿಸಿ ಫೇಸ್ಬುಕ್ ಪೋಸ್ಟ್ : ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ; ಪೊಲೀಸರಿಗೆ ದೂರು, ವ್ಯಕ್ತಿಯ ಬಂಧನಕ್ಕೆ ಒತ್ತಾಯ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪೋಟೋವನ್ನು ಹಾಕಿ ಇವರು ನಮ್ಮನ್ನಗಲಿದ್ದಾರೆ, ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದ್ದು, ಈ ಬಗ್ಗೆ ಸುಳ್ಯ ಬಿಜೆಪಿ ಯುವಮೋರ್ಚಾ ಸುಳ್ಯ ಪೊಲೀಸರಿಗೆ ನೀಡಿದೆ.

ಬಿಲ್ಲವ ಸಂದೇಶ್ ಹೆಸರಿನ ಫೇಸ್ಟುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಚಿತ್ರ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಜಾಲತಾಣದಲ್ಲಿ  ಪೋಸ್ಟ್  ವೈರಲ್ ಆಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. 

ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಲ್ಲಿ " ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನು ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯ ಶಕ್ತಿ ಬ್ಲೂಜೇಪಿ ಪಕ್ಷದ ಕಾರ್ಯಕರ್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ" ಅಂತ ಪೋಸ್ಟ್ ಹಾಕಲಾಗಿದೆ.

ಪೋಸ್ಟ್ ಮಾಡಿದ  ಆರೋಪಿಯನ್ನು ಬಂಧಿಸಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಬಿಜೆಪಿ ಮಹಿಳಾ ಮೋರ್ಚಾದಿಂದ ಸುಳ್ಯ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಘಟನೆ ಬಗ್ಗೆ ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದು ದಲಿತ ಸಮುದಾಯದ ಶಾಸಕಿಯನ್ನು ನಿಂದಿಸಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.

Post a Comment

Previous Post Next Post