ಹೊಯಿಗೆ ಬಜಾರ್ ಸಮೀಪದ ಬೋಲಾರದಲ್ಲಿರುವ ಅಲ್ಬುಕರ್ಕ್ & ಸನ್ಸ್ ಕಾರ್ಖಾನೆಯಲ್ಲಿ ಮಂಗಳವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯಿಂದ ದಟ್ಟವಾದ ಜ್ವಾಲೆ ಹಾಗೂ ಹೊಗೆ ಆಕಾಶಕ್ಕೆ ಏರಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಶ್ರಮದ ನಂತರ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲವೆಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಮತ್ತು ಸಂಭವಿಸಿರುವ ಹಾನಿಯ ಪ್ರಮಾಣ ಎಷ್ಟೆಂಬುದರ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿ ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ.
Post a Comment