Top News

ಮಂಗಳೂರು ನಗರ ಶಸ್ತ್ರಾಸ್ತ್ರ ಪಡೆಯ ಹೆಡ್ ಕಾನ್ಸ್ಟೇಬಲ್ ಮಾರುತಿ ಲಮಾಣಿ ನಿಧನ

ಮಂಗಳೂರು: ನಗರ ಶಸ್ತ್ರಾಸ್ತ್ರ ಪಡೆಯ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಾರುತಿ ಲಮಾಣಿ ಅವರು ತೀವ್ರ ರಕ್ತದೊತ್ತಡದಿಂದ ಉಂಟಾದ ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

ಮೂಲತಃ ಹಾವೇರಿ ಜಿಲ್ಲೆಯವರಾದ ಮಾರುತಿ ಲಮಾಣಿ ಅವರು, ಮಂಗಳೂರಿನಲ್ಲಿ ಪೊಲೀಸ್ ಇಲಾಖೆಯ ನಗರ ಶಸ್ತ್ರಾಸ್ತ್ರ ಪಡೆಯ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಎರಡು ದಿನಗಳ ಹಿಂದೆ ಡ್ಯೂಟಿ ಮುಗಿಸಿ ಮನೆಗೆ ತೆರಳಿದ್ದ ಅವರು, ತಮ್ಮ ಇಬ್ಬರು ಮುದ್ದಿನ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಮೂರ್ಚೆ ತಪ್ಪಿ ಬಿದ್ದಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮೆದುಳಿನ ರಕ್ತಸ್ರಾವವಾಗಿರುವುದಾಗಿ ತಿಳಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಅವರು ತಮ್ಮ ಇಬ್ಬರು ಮಕ್ಕಳು, ಪತ್ನಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನ ಪೊಲೀಸ್ ಇಲಾಖೆ ಹಾಗೂ ಕುಟುಂಬ ವರ್ಗದಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Post a Comment

Previous Post Next Post