Top News

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

ಮಂಗಳೂರು, ಫೆ. 24: ಸುಮಾರು ಎರಡು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಒಬ್ಬನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿರುವ ಘಟನೆ ನಡೆದಿದೆ.

ವಿಟ್ಲ ಪೊಲೀಸ್ ಠಾಣೆಯ ಅಕ್ರ.193/2019 ಪ್ರಕರಣದಲ್ಲಿ (ಕಲಂ 427, 504, 394, 341 ಐಪಿಸಿ ಹಾಗೂ 2(A) Prevention of Destruction and Loss of Property Act) ಆರೋಪಿಯಾಗಿ ಹೆಸರು ಸೇರಿದ್ದ ಬಂಟ್ವಾಳ ತಾಲ್ಲೂಕಿನ ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ನೆಲೆಸಿದ್ದನು.

ಇತನು ಫೆಬ್ರವರಿ 24ರಂದು ವಿದೇಶದಿಂದ ಮರಳಿ ಬರುತ್ತಿದ್ದ ವೇಳೆ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ವಿಟ್ಲ ಠಾಣೆಯ ಹೆಡ್ ಕಾನ್ಸ್‌ಟೇಬಲ್ (HC 668) ಹಾಗೂ ಪೊಲೀಸ್ ಕಾನ್ಸ್‌ಟೇಬಲ್ (PC 2465) ರವರು ಬಂಧಿಸಿದ್ದಾರೆ.

ಬಂಧಿತನನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 7, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Post a Comment

Previous Post Next Post