10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಉತ್ತರ ಪ್ರದೇಶದಲ್ಲಿ ಬಂಧನ

ಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸ್ ಠಾಣೆಯ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುಳ್ಯ ಪೊಲೀಸ್ ಠಾಣೆಯ ಅ.ಕ್ರ 328/2016ರಲ್ಲಿ NDPS ಕಾಯ್ದೆಯ ಕಲಂ 8(c) ಹಾಗೂ 20(b) ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ನಸೀಮ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ LPC No: 11/2024 ಕೂಡ ದಾಖಲಾಗಿತ್ತು.
ಸುಳ್ಯ ಠಾಣೆಯ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ರಮೇಶ್ ಎಲ್, ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ್ ಡಿ ಹಾಗೂ ಪೊಲೀಸ್ ಕಾನ್ಸ್ಟೇಬಲ್ ವಿಖ್ಯಾತ್ ಜೆ ಗೌಡ ಅವರ ತಂಡವು ಉತ್ತರ ಪ್ರದೇಶದ ಖಾಜಿಪುರ ಪ್ರದೇಶದಲ್ಲಿ ಮಾರ್ಚ್ 20ರಂದು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ನಂತರ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Previous Post Next Post