ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಯುವಕನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
2025ರಲ್ಲಿ ಮಂಗಳೂರು ನಗರದಲ್ಲಿ ಸಂಭವಿಸಿದ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವಂತಹ ವಿಷಯಗಳನ್ನು ಹಂಚಿಕೊಂಡಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2025 ರಂತೆ ಪ್ರಕರಣ ದಾಖಲಾಗಿತ್ತು.
ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 353(1), 353(2), 61(2), 55 ಅಡಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿಯುತ್ತಿತ್ತು.
ತನಿಖೆ ವೇಳೆ ‘TN-MADDY’ ಎಂಬ ಖಾತೆಯಿಂದ ಪ್ರಚೋದಕ ಪೋಸ್ಟ್‌ಗಳನ್ನು ಹಾಕುತ್ತಿದ್ದ ವ್ಯಕ್ತಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22) ಎಂದು ಪತ್ತೆಯಾಗಿದೆ. ಆರೋಪಿಯನ್ನು ಮಾರ್ಚ್ 25, 2026ರಂದು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪವನ್ ಆಚಾರ್ಯ ವಿರುದ್ಧ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿಯೂ ಅ.ಕ್ರ. 95/2025 ರಂತೆ ಮತ್ತೊಂದು ಪ್ರಕರಣ ದಾಖಲಾಗಿದ್ದು, ಅದರ ತನಿಖೆಯೂ ಮುಂದುವರಿಯುತ್ತಿದೆ.
Post a Comment