ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ Siddaramaiah ಘೋಷಿಸಿದ್ದಾರೆ.
ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹೆಚ್ಚುತ್ತಿರುವ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣ ಬಳಕೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಹಿನ್ನೆಲೆ ಈ ತೀರ್ಮಾನಕ್ಕೆ ಬಂದಿರುವುದಾಗಿ ತಿಳಿಸಿದರು.
ಮಕ್ಕಳಲ್ಲಿ ಉಂಟಾಗುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಇದೇ ವೇಳೆ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆ ಮಾಡಿ ಅವರ ಮಾನಸಿಕ ಆರೋಗ್ಯವನ್ನು ಸುಧಾರಿಸುವ ಉದ್ದೇಶದಿಂದ, ರಾಜ್ಯದ 204 ಬಿಆರ್‌ಸಿ (BRC) ಕೇಂದ್ರಗಳಲ್ಲಿ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಕ ಮಾಡುವುದಾಗಿ ಸಿಎಂ ಪ್ರಕಟಿಸಿದರು.
ಈ ಕ್ರಮದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಆರೋಗ್ಯಕರ ಶೈಕ್ಷಣಿಕ ವಾತಾವರಣ ನಿರ್ಮಾಣವಾಗಲಿದೆ ಎಂದು ಅವರು ಹೇಳಿದರು
Post a Comment